ಬೆಂಗಳೂರು : ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ರಸ್ತೆಗಳು ಹಾಗೂ ಬೃಹತ್ ನೀರುಕಾಲುವೆಗಳ ನಿರ್ವಹಣೆಗಾಗಿ ಕೂಡಲೆ ಗುತ್ತಿಗೆದಾರರನ್ನು ನೇಮಿಸಿಕೊಳ್ಳಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಕುರಿತು ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಯಾ ಪಾಲಿಕೆಗಳಲ್ಲಿ ಬರುವ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಕೇಂದ್ರಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದ ಎಎಂಸಿ ತಂಡಗಳನ್ನು ರದ್ದುಪಡಿಸಿ, ಆಯಾ 5 ಪಾಲಿಕೆಗಳಲ್ಲಿ ಪ್ರತ್ಯೇಕವಾಗಿ ಹೊಸ ಗುತ್ತಿಗೆದಾರರನ್ನು ನೇಮಕಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಜಿಬಿಎ ವತಿಯಿಂದ ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸಲು ಸಹಾಯವಾಣಿ ಸಂಖ್ಯೆಯಾದ 1533 ಕಾರ್ಯನಿರ್ವಹಿಸಲಿದೆ. ಐದು ನಗರ ಪಾಲಿಕೆಗಳಲ್ಲಿ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಈ ಕೂಡಲೆ ಆಯಾ ನಗರ ಪಾಲಿಕೆಗಳ ಕೇಂದ್ರ ಕಛೇರಿಯಲ್ಲಿ ಯಾವ ಸಹಾಯವಾಣಿ ಸಂಖ್ಯೆಗಳಿವೆ ಎಂಬುದನ್ನು ಜನತೆಗೆ ತಿಳಿಸಿ, ನಾಗರಿಕರಿಗೆ ಅನುಕೂಲವಾಗುವಂತೆ ಮಾಡಲು ಸೂಚನೆ ನೀಡಿದರು.
PublicNext
09/09/2025 08:09 pm