ಕಠ್ಮಂಡು: ನೇಪಾಳದಲ್ಲಿ ಸರಕಾರದ ದಮನಕಾರಿ ನೀತಿ ವಿರುದ್ಧ ಜನ ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳ ನಿಷೇಧವನ್ನು ಖಂಡಿಸಿ ಜನ ದಂಗೆ ಎದ್ದಿದ್ದಾರೆ. ಭುಗಿಲೆದ್ದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಮನೆಯಲ್ಲಿ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಸಜೀವ ದಹನವಾಗಿದ್ದಾರೆ.
ಈ ವೇಳೆ ನೆರವಿಗೆ ಧಾವಿಸಿದ ಅವರ ಬೆಂಬಲಿಗರು ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿದ್ದ ರಾಜಲಕ್ಷ್ಮಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಈ ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚಾಗಿದೆ. ಪ್ರತಿಭಟನಾಕಾರರು ಭಯೋತ್ಪಾದಕರಂತೆ ವರ್ತಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
PublicNext
09/09/2025 08:42 pm