", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1757499936-image-(19).png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್...Read more" } ", "keywords": ""Kannadigas in Nepal, CM Siddaramaiah instructions, stranded Indians, Nepal protests, Gen Z protests Nepal, Karnataka government support, safe repatriation, diplomatic efforts" ", "url": "https://dashboard.publicnext.com/node" }
ಬೆಂಗಳೂರು: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಅಧಿಕೃತವಾಗಿ ಹೇಳಿದ್ದಾರೆ.
ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ಈ ಮೂಲಕ ನೇಪಾಳ ಸದ್ಯ ಬೂದಿಮುಚ್ಚಿದ ಕೆಂಡದ ಪರಿಸ್ಥಿತಿಯಲ್ಲಿದೆ.
ಇದರ ಪರಿಣಾಮವಾಗಿ 39 ಮಂದಿ ಕನ್ನಡಿಗರು ಕಲ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಕನ್ನಡಿಗರನ್ನ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
PublicNext
10/09/2025 03:55 pm