", "articleSection": "Health & Fitness,International", "image": { "@type": "ImageObject", "url": "https://prod.cdn.publicnext.com/s3fs-public/52563-1757500227-WhatsApp-Image-2025-09-10-at-3.58.51-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸ್ಟಾಕ್‌ಹೋಮ್ : ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ನಡೆಯುತ್ತಿದ್ದ ಪ್ರೆಸ್ ಮೀಟ್‌ನಲ್ಲಿ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ...Read more" } ", "keywords": ""health minister collapses, press conference incident, Sweden news, Elisabet Lann, minister falls ill, blood sugar drop, health system crisis" ", "url": "https://dashboard.publicnext.com/node" }
ಸ್ಟಾಕ್‌ಹೋಮ್ : ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ನಡೆಯುತ್ತಿದ್ದ ಪ್ರೆಸ್ ಮೀಟ್‌ನಲ್ಲಿ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ.
ಸುದ್ದಿಗೋಷ್ಠಿಯಲ್ಲಿ 48 ವರ್ಷದ ಎಲಿಸಬೆಟ್ ಲ್ಯಾನ್, ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಹಾಗೂ ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಪಕ್ಕದಲ್ಲಿ ನಿಂತಿದ್ದರು. ಪತ್ರಕರ್ತರು ಪ್ರಶ್ನೆ ಕೇಳುತ್ತಿರುವಾಗಲೇ ವೇದಿಕೆಯಿಂದ ಗಾಜಿನ ಪೋಡಿಯಂ ಸಮೇತ ಕುಸಿದುಬಿದ್ದಿದ್ದಾರೆ.
16 ಸೆಕೆಂಡ್‌ಗಳ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಚಿವರನ್ನ ಅಧಿಕಾರಿಗಳು ಹಾಗೂ ವೇದಿಕೆ ಮುಂಭಾಗದಲ್ಲಿದ್ದ ಪತ್ರಕರ್ತರು ಮೇಲೆತ್ತಿ ಕೂರಿಸಿದ್ದಾರೆ. ಸ್ವಲ್ಪ ನೀರು ಕುಡಿಸಿ ವಿಶ್ರಾಂತಿ ಕೊಡಿಸಿದ್ದಾರೆ. ಲ್ಯಾನ್ ಸ್ವಲ್ಪ ಸಮಯದ ನಂತರ ಮತ್ತೆ ಸುದ್ದಿಗೋಷ್ಠಿಗೆ ಹಾಜರಾಗಿ ಅನೇಕ ವಿಷಯ ಪ್ರಸ್ತಾಪಿಸಿದ್ದಾರೆ.
ಸದ್ಯ ನೂತನ ಸಚಿವರು ಕುಸಿದುಬಿದ್ದ ಬಗ್ಗೆ ನಿಖರ ಕಾರಣ ತಿಳಿದಿಲ್ಲ. ಮೇಲ್ನೋಟಕ್ಕೆ ಕಡಿಮೆ ರಕ್ತದೊತ್ತಡದಿಂದ (ಲೋ ಬಿಪಿ) ಸಂಭವಿಸಿರಬಹುದು ಎಂದು ತಿಳಿಸಿರುವುದಾಗಿ ವರದಿಯಾಗಿದೆ.
PublicNext
10/09/2025 05:29 pm