ಹುಬ್ಬಳ್ಳಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ರಿಂಗ್ ರೋಡ್ ಬಳಿಯಲ್ಲಿ ನಡೆದಿದೆ.
ಕಲಘಟಗಿ ತಾಲೂಕಿನ ಮಿಶ್ರೀಕೋಟಿ ಗ್ರಾಮದ ಶ್ರೀಪಾದ ಕಾಂಬ್ಳೆ (51) ಎಂಬವರೇ ಸಾವನ್ನಪ್ಪಿದ್ದು, ಅವರು ಗಬ್ಬೂರ ಮಾರ್ಗವಾಗಿ ಪ್ಲೈಓವರ್ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗಳಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/10/2025 06:41 pm
LOADING...