ಉಡುಪಿ: ನಟ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಉಡುಪಿ ಶ್ರೀಕೃಷ್ಣ ಮಠದ ಗೀತೋತ್ಸವದ ಸಮಾರೋಪದಲ್ಲಿ ಭಾಗಿಯಾದರು. ರಥ ಬೀದಿಗೆ ಆಗಮಿಸಿ ಕನಕನ ಗುಡಿಗೆ ಮಾಲಾರ್ಪಣೆ ಮಾಡಿ ಕನಕನ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದರು. ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜಿ ಸಲ್ಲಿಸಿದರು. ಪರ್ಯಾಯ ಸುಗುಣೇಂದ್ರ ತೀರ್ಥ ಸ್ವಾಮೀಜಿ ಪವನ್ ಕಲ್ಯಾಣ್ ಅವರಿಗೆ ನವಗ್ರಹ ಕಿಂಡಿಯ ಮೂಲಕ ದೇವರ ದರ್ಶನ ಮಾಡಿಸಿ, ಸುವರ್ಣತೀರ್ಥ ಮಂಟಪದಲ್ಲಿ ಪ್ರಸಾದ ನೀಡಿದರು. ಗೀತಾ ಮಂದಿರಕ್ಕೆ ತೆರಳಿ ಧ್ಯಾನ ಮಂದಿರದ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ದರ್ಶನ ಮಾಡಿಸಿದರು.
ಸಂಜೆ ಮಠದ ರಾಜಾಂಗಣದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಪರ್ಯಾಯ ಮಠದ ವತಿಯಿಂದ ಅಭಿನವ ಶ್ರೀ ಕೃಷ್ಣದೇವರಾಯ ಪ್ರಶಸ್ತಿಯನ್ನು ಪವನ್ ಕಲ್ಯಾಣ್ ಅವರಿಗೆ ನೀಡಿ ಗೌರವಿಸಲಾಯಿತು. ಧರ್ಮರಕ್ಷಣೆಯ ಕಾರ್ಯವನ್ನು ಮಾಡುತ್ತಿರುವುದರಿಂದ ಈ ಬಿರುದು ನೀಡುತ್ತಿದ್ದೇವೆ ಎಂದು ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು. ಯುವ ಜನರ ಒತ್ತಡ ಪರಿಹಾರಕ್ಕೆ ಭಗವದ್ಗೀತೆಯೇ ಏಕೈಕ ಮಾರ್ಗ. ಗೋವು ರಕ್ಷಣೆ ವಿಚಾರದಲ್ಲಿ ಅನ್ಯ ಧರ್ಮವನ್ನು ದೂರುವ ಬದಲು, ಪ್ರತಿ ಕುಟುಂಬ ಒಂದು ಗೋವನ್ನು ಸಾಕಿ ಎಂದು ಪವನ್ ಕಲ್ಯಾಣ್ ಕರೆ ನೀಡಿದರು. ರಾಜಕೀಯದಲ್ಲಿ ಸೋಲು ಗೆಲುವು ನನಗೆ ಮುಖ್ಯ ಅಲ್ಲ. ಯಾಕಂದ್ರೆ ಭಗವದ್ಗೀತೆ ನಿಷ್ಕಾಮ ಕರ್ಮವನ್ನು ನನಗೆ ಬೋಧಿಸಿದೆ ಎಂದರು. ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ಮೋದಿಯವರು ಭಗವದ್ಗೀತೆಯನ್ನು ನೀಡಿದ್ದಾರೆ. ಯುದ್ಧಕಾಲಕ್ಕೆ ಇದೇ ಪರಿಹಾರ ಎಂದರು.
PublicNext
08/12/2025 07:28 am
LOADING...