ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಸಮಾವೇಶದ ಖರ್ಚು ಎಲ್ಲಿ ಹೋಯಿತು? - ಜಿಲ್ಲಾಡಳಿತಕ್ಕೆ ಕುಮಾರಸ್ವಾಮಿ ತೀವ್ರ ಆಗ್ರಹ!

ಹಾಸನ: ಇತ್ತೀಚೆಗೆ ನಗರದಲ್ಲಿ ನಡೆದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಕಾರ್ಯಕ್ರಮಕ್ಕೆ ಖರ್ಚು ಮಾಡಿದ ಹಣದ ವಿವರಗಳನ್ನು ಜಿಲ್ಲಾಡಳಿತ ತಕ್ಷಣ ಬಹಿರಂಗಪಡಿಸಬೇಕು ಎಂದು ಮಾಜಿ ಶಾಸಕ ಎಚ್‌.ಕೆ. ಕುಮಾರಸ್ವಾಮಿ ತೀವ್ರವಾಗಿ ಒತ್ತಾಯಿಸಿದ್ದಾರೆ. ಸಮಾವೇಶ ಕಾರ್ಯಕ್ರಮಕ್ಕೆ ಎಷ್ಟು ಹಣವನ್ನು ಖರ್ಚು ಮಾಡಲಾಗಿದೆ ಎಂಬುದನ್ನು ಜಿಲ್ಲಾಡಳಿತ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಫಲಾನುಭವಿಗಳಿಗೆ ವಂಚನೆ ಆರೋಪ

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಕಂದಾಯ ಇಲಾಖೆಯ ಉತ್ತಮ ಕಾರ್ಯವನ್ನು ಶ್ಲಾಘಿಸಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಅಭಿನಂದಿಸಿದರು. ಆದರೆ, 'ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ'ದ ಆಯೋಜನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲಾ ಫಲಾನುಭವಿಗಳಿಗೂ ಸೌಲಭ್ಯ ವಿತರಿಸುವುದಾಗಿ ಜನರನ್ನು ಸೇರಿಸಿದರೂ, ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೇವಲ ನಾಲ್ಕು ಮಂದಿಗೆ ಮಾತ್ರ ಸೌಲಭ್ಯಗಳನ್ನು ವಿತರಿಸಿ ಉಳಿದವರನ್ನು ಬರಿಗೈಯಲ್ಲಿ ಕಳುಹಿಸಲಾಗಿದೆ ಎಂದು ಅವರು ಆರೋಪಿಸಿದರು. ಸೌಲಭ್ಯಗಳ ನಿರೀಕ್ಷೆಯೊಂದಿಗೆ ಸಮಾವೇಶಕ್ಕೆ ಬಂದ ಅದೆಷ್ಟೋ ಫಲಾನುಭವಿಗಳು ಇಂದಿಗೂ ಸೌಲಭ್ಯ ಸಿಗದೆ ನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ ಎಂದು ದೂರಿದರು.

ಅನುದಾನದ ಕುರಿತು ಮಾಹಿತಿ ಕೇಳಿದ ಕುಮಾರಸ್ವಾಮಿ

ಅಲ್ಲದೆ, ಕಾಂಗ್ರೆಸ್ ಸರ್ಕಾರವು ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಹಾಸನ ಜಿಲ್ಲೆಗೆ ಎಷ್ಟು ಅನುದಾನ ಮಂಜೂರು ಮಾಡಿದೆ ಮತ್ತು ಉದ್ಘಾಟನೆಗೊಂಡಿರುವ ವಿವಿಧ ಕಾಮಗಾರಿಗಳಿಗೆ ಸರ್ಕಾರದ ಕೊಡುಗೆ ಎಷ್ಟು ಎಂಬ ಬಗ್ಗೆಯೂ ಮಾಹಿತಿ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

Edited By : PublicNext Desk
PublicNext

PublicNext

10/12/2025 05:13 pm

Cinque Terre

7.98 K

Cinque Terre

0

ಸಂಬಂಧಿತ ಸುದ್ದಿ