ವಿಜಯಪುರ: ವಿಜಯಪುರ ಜಿಲ್ಲೆಯ ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಮುದಾಯ ಆರೋಗ್ಯ ಕೇಂದ್ರ ಸಮಸ್ಯೆಗಳ ಆಗರವಾಗಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗದೇ ಗಂಭೀರ ಸಮಸ್ಯೆಗಳು ಉದ್ಭವಿಸುತ್ತಿದ್ದು ಕೂಡಲೇ ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಆಸ್ಪತ್ರೆ ಮುಂಭಾಗದಲ್ಲೇ ಧರಣಿ ಆರಂಭಿಸಿದರು.
ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ವಿನಯಾ ಹೂಗಾರ ಪ್ರತಿಭಟನಾಕಾರರ ಮನವೊಲಿಸಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಲಿಖಿತ ರೂಪದಲ್ಲಿ ಭರವಸೆ ನೀಡಿ ಪ್ರತಿಭಟನಾಕಾರರಿಂದ ಮನವಿ ಸ್ವಿಕರಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
PublicNext
14/12/2025 01:32 pm
LOADING...