ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಕಲೇಶಪುರ ಕೆರೆ ಅಭಿವೃದ್ಧಿಗೆ ಆದ್ಯತೆ – ಜನರ ಆರೋಗ್ಯ ಮತ್ತು ಸೌಂದರ್ಯಕ್ಕೆ ಒತ್ತು: ಶಾಸಕ ಸಿಮೆಂಟ್ ಮಂಜು

ಸಕಲೇಶಪುರ :ಈ ಹಿಂದೆ ಕರ್ನಾಟಕದಿಂದ ದೆಹಲಿಯ ಪ್ರತಿನಿಧಿಯಾಗಿದ್ದ ಬೈಕೆರೆ ನಾಗೇಶ್ ಅವರ ಕನಸಿನ ಕೂಸಾಗಿದ್ದ ಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿರುವ ಕೆರೆಯನ್ನು ಅಭಿವೃದ್ಧಿಪಡಿಸುವ ಕುರಿತು ಶಾಸಕರಾದ ಸಿಮೆಂಟ್ ಮಂಜು ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಇರುವ ಈ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಸುತ್ತಮುತ್ತಲಿನ ಪ್ರದೇಶದಲ್ಲಿ ಜನರಿಗೆ ಅನುಕೂಲವಾಗುವಂತೆ ವಾಯುವಿಹಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಜೊತೆಗೆ ಸ್ಥಳೀಯ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಪಾದಚಾರಿ ಮಾರ್ಗ, ಸಂಚಾರ ವ್ಯವಸ್ಥೆ ಹಾಗೂ ಸೌಂದರ್ಯ ವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಅಭಿವೃದ್ಧಿ ಯೋಜನೆಯಿಂದ ಪಟ್ಟಣದ ಸೌಂದರ್ಯ ಹೆಚ್ಚಾಗುವುದರ ಜೊತೆಗೆ ಸಾರ್ವಜನಿಕರಿಗೆ ವಿಶ್ರಾಂತಿ, ಆರೋಗ್ಯ ಮತ್ತು ಮನರಂಜನೆಗೆ ಉತ್ತಮ ವಾತಾವರಣ ಸಿಗಲಿದೆ. ಸ್ಥಳೀಯ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಶಾಸಕರು ಹೇಳಿದರು.

Edited By : Vinayak Patil
PublicNext

PublicNext

14/12/2025 02:14 pm

Cinque Terre

8 K

Cinque Terre

0

ಸಂಬಂಧಿತ ಸುದ್ದಿ