ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಮರವಂತೆ ಬೀಚಿನಲ್ಲಿ ಅಂಗಡಿಗಳ ತೆರವು ಜಿಲ್ಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ ಗೂಡಂಗಡಿ ಮಾಲೀಕರು

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರ ಮರವಂತೆ ವರಹ ಸ್ವಾಮಿ ದೇವಸ್ಥಾನದ ಎದುರು ಅಕ್ರಮವಾಗಿ ತಲೆ ಎತ್ತಿರುವ ಬೀಡಾ ಅಂಗಡಿಗಳು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿವೆ. ರಾಜ್ಯ ಸರ್ಕಾರವು ತ್ರಾಸಿ ಮತ್ತು ಮರವಂತೆ ಬೀಚ್‌ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇರಿಸಿದೆ. ಈ ಅಭಿವೃದ್ಧಿ ಕಾರ್ಯದ ಭಾಗವಾಗಿ, ಬೀಚ್‌ ಬಳಿಯಿದ್ದ ಹಲವು ಅಂಗಡಿಗಳನ್ನು ಈ ಹಿಂದೆ ತೆರವುಗೊಳಿಸಲಾಗಿತ್ತು. ಆದರೆ, ಮರವಂತೆ ಭಾಗದ ಈ ನಿರ್ದಿಷ್ಟ ಅಂಗಡಿಗಳು ಮಾತ್ರ ಯಾವುದೇ ಅಡೆತಡೆಯಿಲ್ಲದೆ ಹಾಗೆಯೇ ನಿಂತಿವೆ.

ವಾಸ್ತವವಾಗಿ, ಈ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಈ ಹಿಂದೆ ಹಲವು ಬಾರಿ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಬೈಂದೂರು ತಹಸೀಲ್ದಾರ್‌ಗೆ ಸ್ಪಷ್ಟ ಆದೇಶಗಳನ್ನು ಹೊರಡಿಸಿದ್ದರು.

ಆದರೆ, ಈ ಆದೇಶಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅಂಗಡಿಗಳು ಹಾಗೆಯೇ ಮುಂದುವರಿದಿವೆ. ಇದು ಯಾರ ಕೃಪಾ ಕಟಾಕ್ಷದಿಂದ ನಡೆಯುತ್ತಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಬೀಚ್‌ನ ಸೌಂದರ್ಯೀಕರಣದ ದೃಷ್ಟಿಯಿಂದ ಎಲ್ಲಾ ಅಂಗಡಿಗಳನ್ನು ತೆರವುಗೊಳಿಸಬೇಕೆಂಬ ಸ್ಪಷ್ಟ ಆದೇಶವಿದ್ದರೂ, ಇಲ್ಲಿ ಮಾತ್ರ ಜಿಲ್ಲಾ ಆಡಳಿತ ಮತ್ತು ಜಿಲ್ಲಾಧಿಕಾರಿಗಳ ಆದೇಶವನ್ನು ಗಾಳಿಗೆ ತೂರಿ, ಅಕ್ರಮವಾಗಿ ಕೆಂಪು ಮಣ್ಣು ತುಂಬಿಸಿ ಭೂ ಮಾಫಿಯಾಕ್ಕೆ ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅಕ್ರಮಗಳತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮತ್ತು ಪ್ರವಾಸಿಗರು ಆಗ್ರಹಿಸಿದ್ದಾರೆ.

Edited By :
PublicNext

PublicNext

14/12/2025 02:17 pm

Cinque Terre

15.54 K

Cinque Terre

0

ಸಂಬಂಧಿತ ಸುದ್ದಿ