ಶಿವಮೊಗ್ಗ: ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕಾರಣಿಗಳು, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅಗಲಿಕೆಯ ಸುದ್ದಿ ಅತೀವ ಆಘಾತವನ್ನು ತಂದಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಇಡೀ ಸಮಾಜಕ್ಕೆ ಅವರ ನೇತೃತ್ವ, ಮಾರ್ಗದರ್ಶನ, ಅವರ ಕೊಡುಗೆ ಅಸಾಧಾರಣವಾದದ್ದು. ನಾಡಿನ ರಾಜಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಪಕ್ಷಾತೀತವಾಗಿ ಅವರು ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಅವರ ಅಗಲಿಕೆಯಿಂದ ಸಮಾಜ ತನ್ನ ಮೇರು ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನಮ್ಮ ಕುಟುಂಬದ ಒಬ್ಬ ಹಿರಿಯರನ್ನು ಕಳೆದುಕೊಂಡ ದುಃಖ ನಮಗಾಗಿದೆ ಎಂದರು.
ವಿಶೇಷವಾಗಿ, ಅವರ ನೇತೃತ್ವದಲ್ಲಿ ಶಿಕ್ಷಣ ಸಂಸ್ಥೆಗಳು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿವೆ. ಸಾವಿರಾರು ಜನರಿಗೆ ಆರೋಗ್ಯ ಸೇವೆ ನೀಡಿದ್ದಾರೆ. ಅವರ ಸಮಾಜ ಸೇವೆ ಕೂಡ ಅಸಾಧಾರಣವಾದದ್ದು. ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಅವರ ಮಾರ್ಗದರ್ಶನವನ್ನು, ನೇತೃತ್ವವನ್ನು ನಾವು ಮರೆಯುವುದು ಸಾಧ್ಯವೇ ಇಲ್ಲ! ಒಬ್ಬ ದೂರದೃಷ್ಟಿಯ ನಾಯಕನ, ಮುತದ್ಧಿ ಧುರೀಣರನ್ನು, ರಾಜ್ಯ ಒಬ್ಬ ಅಪರೂಪದ ಹಿರಿಯ ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ, ನನಗೆ ಅವರ ಮಾರ್ಗದರ್ಶನಗಳನ್ನು, ಪ್ರೀತಿ, ಆತ್ಮೀಯತೆ, ಆಶೀರ್ವಾದಗಳನ್ನು ಶಬ್ದಗಳಲ್ಲಿ ವಿವರಿಸುವುದು ಸಾಧ್ಯವಿಲ್ಲ.
ದಿವಂಗತ ನಾಯಕರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತಾ, ಅವರ ಕುಟುಂಬ ಸದಸ್ಯರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದರು.
Kshetra Samachara
14/12/2025 10:13 pm
LOADING...