ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಾರ್ಕಿಂಗ್ ನಿಯಮ ವಿರೋಧಿಸಿ ಟ್ಯಾಕ್ಸಿ ಚಾಲಕರ ಪ್ರತಿಭಟನೆ

ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ) ಜಾರಿಗೆ ತಂದಿರುವ ಹೊಸ ಪಾರ್ಕಿಂಗ್ ನಿಯಮಗಳನ್ನು ವಿರೋಧಿಸಿ, ವಿಮಾನ ನಿಲ್ದಾಣದ ಟ್ಯಾಕ್ಸಿ ಚಾಲಕರು ಇಂದು ಪ್ರತಿಭಟನೆಗೆ ಇಳಿದಿದ್ದಾರೆ. ಸಾದಹಳ್ಳಿ ಟೋಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಚಾಲಕರು, ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಲು ಸಜ್ಜಾಗಿದ್ದಾರೆ. ಈ ಪ್ರತಿಭಟನೆಯಲ್ಲಿ ನೂರಾರು ಟ್ಯಾಕ್ಸಿ ಚಾಲಕರು ಭಾಗವಹಿಸುವ ನಿರೀಕ್ಷೆಯಿದ್ದು, ಇಂದು ವಿಮಾನ ನಿಲ್ದಾಣದಿಂದ ಯಾವುದೇ ಟ್ಯಾಕ್ಸಿ ಸೇವೆ ನೀಡದಿರಲು ಚಾಲಕರು ನಿರ್ಧಾರ ಮಾಡಿದ್ದಾರೆ. ಇದರಿಂದಾಗಿ ವಿಮಾನ ನಿಲ್ದಾಣದ ಟ್ಯಾಕ್ಸಿ ಸೇವೆಯಲ್ಲಿ ಗಣನೀಯ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

Edited By : Suman K
PublicNext

PublicNext

16/12/2025 10:15 am

Cinque Terre

9.3 K

Cinque Terre

0

ಸಂಬಂಧಿತ ಸುದ್ದಿ