ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: 'ಓಟ್ ಚೋರಿ' ಸಮಾವೇಶಕ್ಕೆ ಸಾರ್ವಜನಿಕರ ಸ್ಪಂದನೆ- ಇಡೀ ದೇಶಕ್ಕೆ ಸಂದೇಶ

ಬೆಳಗಾವಿ: 'ಓಟ್ ಚೋರಿ' ವಿರುದ್ಧ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಸಾರ್ವಜನಿಕರ ಸ್ಪಂದನೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಡೆಯುತ್ತಿರುವ ಅನ್ಯಾಯವನ್ನು ತಡೆಯಲು 4000 ಜನರು ತಲಾ 20 ರಿಂದ 50 ಸಾವಿರ ರೂಪಾಯಿ ಖರ್ಚು ಮಾಡಿಕೊಂಡು ಆಸಕ್ತಿಯಿಂದ ಸಮಾವೇಶಕ್ಕೆ ಬಂದಿದ್ದರು ಎಂದು ತಿಳಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಈ ಹೋರಾಟ ನಡೆದಿದ್ದು, ಇದು ಇಡೀ ದೇಶಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ಹೇಳಿದರು. ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಮರಳಬೇಕು ಎಂದು ಪ್ರತಿಪಾದಿಸಿದ್ದಾರೆ. ಈ ಹೋರಾಟ ಅತ್ಯಂತ ಯಶಸ್ವಿಯಾಗಿದ್ದು, ರಾಜ್ಯದ ಜನರಿಗೆ ನಾನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಕರ್ನಾಟಕದ ಆಂತರಿಕ ವಿಷಯಗಳ ಕುರಿತು ನಡೆದ ಚರ್ಚೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

Edited By : Manjunath H D
PublicNext

PublicNext

16/12/2025 10:34 am

Cinque Terre

11.61 K

Cinque Terre

1

ಸಂಬಂಧಿತ ಸುದ್ದಿ