ಧಾರವಾಡ: ಬೆಳಗಾವಿ ಕೃಷಿ ವಿಜಿಲೆನ್ಸ್ ಉಪನಿರ್ದೇಶಕ ರಾಜಶೇಖರ್ ಬಿಜಾಪುರ ಅವರ ಧಾರವಾಡದ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ರಾಜಶೇಖರ್ ಅವರ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಚಿತ್ರದುರ್ಗ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ರಾಜಶೇಖರ್ ಅವರು ಈ ಹಿಂದೆ ಧಾರವಾಡದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರಿಂದ ಅವರು ಧಾರವಾಡದ ಕೆಲಗೇರಿ ಹಾಗೂ ಸನ್ಮತಿ ನಗರದಲ್ಲೂ ಮನೆ ಹೊಂದಿದ್ದರು. ಈಗ ಎರಡೂ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್‌ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/12/2025 11:12 am
LOADING...