ಬೆಳಗಾವಿ: ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಧ್ವೇಷ ಭಾಷಣ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ದ್ವೇಷದ ಬೀಜ ಬಿತ್ತುವ ಹಾಗೂ ಸಮಾಜಕ್ಕೆ ದ್ರೋಹ ಮಾಡುವವರಿಗೆ ಈ ಕಾಯ್ದೆ ಸ್ಪಷ್ಟ ಎಚ್ಚರಿಕೆಯಾಗಿದೆ" ಎಂದರು. ಸಮಾಜದ ಸ್ವಾಸ್ಥ್ಯ ರಕ್ಷಣೆಗೆ ಒತ್ತು ನೀಡುವವರು ಈ ಮಸೂದೆಯನ್ನು ಬೆಂಬಲಿಸಿ, ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸಚಿವರು ಕರೆ ನೀಡಿದರು.
ಬೆಳಗಾವಿ ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಜನವರಿ 26ರಂದು ಪ್ರಕರಣ ವಿಚಾರಣೆಗೆ ಬರಲಿದೆ ಎಂಬ ಮಾಹಿತಿ ಸರಿಯಲ್ಲ ಎಂದು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದರು. ವಾಸ್ತವವಾಗಿ, ಜನವರಿ 21ರಂದು ಪ್ರಕರಣ ವಿಚಾರಣೆಗೆ ಬರಲಿದೆ. ರಾಜ್ಯವು ಗಡಿಗಳ ರಕ್ಷಣೆ ಹಾಗೂ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸಂವಿಧಾನಾತ್ಮಕವಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹಿರಿಯ ನ್ಯಾಯವಾದಿ ಶಿವರಾಜ್ ಪಾಟೀಲ್ ಅವರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆಯಲಾಗಿದೆ. ಅದರಂತೆ, ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ವಾದ ಮಂಡಿಸಲಾಗುವುದು ಎಂದು ಸಚಿವರು ವಿವರಿಸಿದರು.
ಚಳಿಗಾಲದ ಅಧಿವೇಶನವನ್ನು ಮುಂದುವರಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಸಚಿವ ಎಚ್.ಕೆ. ಪಾಟೀಲ್, ಸದ್ಯಕ್ಕೆ ಅಂತಹ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
PublicNext
16/12/2025 01:23 pm
LOADING...