ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ರಾಪ್ತ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ಮೈಲಾರಿ ವಿರುದ್ಧ ಪೋಕ್ಸೋ ಕೇಸ್

ಬಾಗಲಕೋಟೆ: ಲವ್ ಆತೋ ಲಪಡಾತೋ ಮೊನ್ನೆ ಅಕಿದು ಮದುವೆ ಆತೋ 'ಬಾಗಲಕೋಟೆ ಬಸ್ ಸ್ಟ್ಯಾಂಡಿನ್ಯಾಗ ನಿಂತಾಳ ಕಡಿಬಿಡಿಕಿ' 'ಯಾದಿ ಮ್ಯಾಲ ಶಾದಿ' ಮುಂತಾದ ಜನಪ್ರಿಯ ಜಾನಪದ ಹಾಡುಗಳ ಮೂಲಕ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್‌ ಆಗಿ ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹೌದು ಬಾಲಕಿ ನೀಡಿದ ದೂರಿನ ಪ್ರಕಾರ, ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ನೃತ್ಯ ಮಾಡಲು ಬಂದಿದ್ದ ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯನ್ನು, ಮ್ಯೂಸಿಕ್ ಮೈಲಾರಿ ಮತ್ತು ಆತನ ಸಹಚರರು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕಿ ನೀಡಿದ ದೂರಿನ ಅನ್ವಯ, ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ, ಡಿಸೆಂಬರ್ 15ರಂದು ಈ ಪ್ರಕರಣವನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಸ್ತುತ, ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸ್ ತನಿಖೆಯಿಂದ ಘಟನೆಯ ಸತ್ಯಾಂಶ ಹೊರಬರಬೇಕಿದೆ.

ವರದಿ: ಮಂಜುನಾಥ ಲಂಗೋಟಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By :
PublicNext

PublicNext

16/12/2025 10:25 pm

Cinque Terre

11.99 K

Cinque Terre

2