ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರಿಗೆ ಸಿಎಂ ಮೋಸ, ಕೂಡಲೇ ರಾಜೀನಾಮೆ ನೀಡಲಿ : ಕಲ್ಲೂರು ಮೇಘರಾಜ್

ಶಿವಮೊಗ್ಗ : ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದ ಸಿಎಂ ಸಿದ್ಧರಾಮಯ್ಯ ಅವರು ಇದುವರೆಗೆ ಕೊಟ್ಟ ಮಾತನ್ನು ಈಡೇರಿಸದೇ ಇದ್ದುದರಿಂದ ಅವರು ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಜೆಟ್ ನಲ್ಲಿ ಸಿದ್ಧರಾಮಯ್ಯನವರು ಕೆಸಿಸಿಎನ್(ಅಲ್ಪಾವಧಿ ರೈತರ ಸಾಲ) ಯೋಜನೆಯಡಿಯಲ್ಲಿ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ರೈತರಿಗೆ ಸಾಲ ಸೌಲಭ್ಯವನ್ನು ಒದಗಿಸುವುದಾಗಿ ಘೋಷಣೆ ಮಾಡಿದ್ದರು. ಆದರೆ, ಈ ತನಕ ಯಾವುದೇ ರೈತರಿಗೆ ಅಲ್ಪಾವಧಿ ಸಾಲ ನೀಡದೇ ರೈತರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಾಲ ವಿತರಣೆ ಮತ್ತು ಬೆಳೆ ಖರೀದಿ ಪ್ರಕ್ರಿಯೆಗಳಲ್ಲಿನ ಲೋಪ ದೋಷಗಳಿಂದ ರೈತರ ಆತ್ಮಹತ್ಯೆ ವಿಷಯದಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ ಎಂದು ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ವರದಿ ಮಾಡಿದೆ. ಇದು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಅಲ್ಲದೇ, ಕರ್ನಾಟಕದಲ್ಲಿ ರೈತರಿಗೆ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕ್ ಮತ್ತು ಅಪೆಕ್ಸ್ ಬ್ಯಾಂಕ್‌ಗಳಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಕಾಲದಲ್ಲಿ ಶೂನ್ಯ ಬಡ್ಡಿದರದ ಸಾಲ ಸೌಲಭ್ಯ ಸಿಗದೇ ಕೃಷಿ ಚಟುವಟಿಕೆಗಳು ಅರ್ಧಕ್ಕೆ ನಿಂತು ಹೋಗಿವೆ ಎಂದು ಆರೋಪಿಸಿದರು.

Edited By : Vinayak Patil
PublicNext

PublicNext

16/12/2025 10:47 pm

Cinque Terre

3.46 K

Cinque Terre

0

ಸಂಬಂಧಿತ ಸುದ್ದಿ