ಬಾಗಲಕೋಟೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ, ಜನಪ್ರಿಯ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯನ್ನ ಬಂಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುಡಗುಂಟಿ ಗ್ರಾಮದ ನಿವಾಸಿಯಾಗಿರುವ ಮ್ಯೂಸಿಕ್ ಮೈಲಾರಿ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ, ಜನಪ್ರಿಯ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯನ್ನ ಪೋಕ್ಸೊ ಪ್ರಕರಣದಲ್ಲಿ ಬಂಧಿಸಲಾಗಿದೆ.
ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಬಾಗಲಕೋಟೆ ಪೊಲೀಸರು, ವಿಜಯಪುರ ಬಳಿಯ ತಿಕೋಟಾದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಪ್ರಕರಣ ದಾಖಲಾದ ಕೂಡಲೇ ಮೈಲಾರಿ ಬಂಧನಕ್ಕೆ ಬಾಗಲಕೋಟೆ ಪೊಲೀಸರು ಬಲೆ ಬೀಸಿದ್ದರು. ನಿನ್ನೆಯಿಂದಲೇ ನಮ್ಮ ತಂಡ ಮೈಲಾರಿ ಬೆನ್ನು ಬಿದ್ದಿತ್ತು. ತಿಕೋಟಾದಿಂದ ವಿಜಯಪುರಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ಅವರನ್ನು ಬಂಧಿಸಲಾಯಿತು ಎಂದು ತಿಳಿಸಿದ್ದಾರೆ.
PublicNext
17/12/2025 04:25 pm
LOADING...