ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಉಬ್ರಾಣಿ ಹೋಬಳಿಯ ಉಬ್ರಾಣಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿ ಫಸಲಿಗೆ ಬಂದಿದ್ದ ಅಡಿಕೆ ಮರಗಳನ್ನು ಸಂಪೂರ್ಣವಾಗಿ ನಾಶಪಡಿಸಿರುವ ಘಟನೆ ನಡೆದಿದೆ.
ನಿರಂತರವಾಗಿ ಕಾಡಾನೆಗಳು ಗ್ರಾಮಗಳತ್ತ ನುಗ್ಗಿ ರೈತರ ಬೆಳೆಗಳನ್ನು ಹಾಳು ಮಾಡುತ್ತಿರುವುದರಿಂದ ಗ್ರಾಮಸ್ಥರು ತೀವ್ರ ಆತಂಕದಲ್ಲಿದ್ದಾರೆ.
ಕಾಡಾನೆಗಳ ದಾಳಿ ಕುರಿತು ಸಂಬಂಧಪಟ್ಟ ಅರಣ್ಯ ಅಧಿಕಾರಿಗಳಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ರೀತಿಯ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಡಿಕೆ ಸೇರಿದಂತೆ ಬೆಳೆ ನಾಶವಾಗಿರುವುದರಿಂದ ರೈತರು ಭಾರೀ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ.
ನಾಶವಾದ ಬೆಳೆಗಳಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳ ದಾಳಿ ತಡೆಯಲು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ದಿನನಿತ್ಯ ಕಾಡಾನೆಗಳ ಭೀತಿಯಲ್ಲಿ ಬದುಕುವುದು ಅಸಾಧ್ಯವಾಗಿದ್ದು, ಶೀಘ್ರ ಸ್ಪಂದಿಸದಿದ್ದಲ್ಲಿ ಪಾದಯಾತ್ರೆ ಮೂಲಕ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
Kshetra Samachara
17/12/2025 04:39 pm
LOADING...