ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟಿಗಟ್ಟಲೆ ಹಗರಣ: KRIDL ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ ರೂಪಾಯಿ ಹಣ ದುರ್ಬಳಕೆ, ಗುತ್ತಿಗೆದಾರರಿಂದ ಕಮಿಷನ್ ಪಡೆದಿರುವ ಹಾಗೂ ಕಳಪೆ ಕಾಮಗಾರಿ ನಡೆಸಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಕುರಿತು ಲೋಕಾಯುಕ್ತಕ್ಕೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು.

ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಕಚೇರಿಯ ಪ್ರಮುಖ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದೆ.

Edited By : Vinayak Patil
PublicNext

PublicNext

17/12/2025 04:46 pm

Cinque Terre

8.82 K

Cinque Terre

1

ಸಂಬಂಧಿತ ಸುದ್ದಿ