ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಖಂಡಿಸಿ ಮತ್ತು ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ವಿರುದ್ಧ, ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಎಲ್ಲಾ ಸಚಿವರು ಮತ್ತು ಶಾಸಕರು ಪಾಲ್ಗೊಂಡು ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದ ಖಂಡನೆ
ಪ್ರತಿಭಟನಾಕಾರರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ತೀವ್ರವಾಗಿ ಖಂಡಿಸಿದರು. ಇದೇ ವೇಳೆ, ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಆರೋಪಪಟ್ಟಿಯನ್ನು ವಿಚಾರಣಾ ನ್ಯಾಯಾಲಯ (ಟ್ರಯಲ್ ಕೋರ್ಟ್) ಸಾರಾಸಗಟಾಗಿ ತಿರಸ್ಕರಿಸಿದ ತೀರ್ಮಾನವನ್ನು ಸಂಪೂರ್ಣವಾಗಿ ಬೆಂಬಲಿಸಿದರು. ಕೇಂದ್ರ ಸರ್ಕಾರವು ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಗೆಡವುತ್ತಿದೆ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
PublicNext
17/12/2025 05:04 pm
LOADING...