ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಣ್ಣನ ಹುಡುಗಿ ಪಾತ್ರದಲ್ಲಿ ನೋಡಿ ಉಪೇಂದ್ರ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಸೂರಜ್ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಸಂಗೀತ ನಿರ್ದೇಶಕರಾಗಿ ಅನೇಕ ಹಿಟ್‌ ಹಾಡುಗಳನ್ನು ನೀಡಿರುವ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ 45 ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ.

ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ಹಾಗೂ ವಿಭಿನ್ನ ಪಾತ್ರಗಳಿಗೆ ಹೆಸರಾಗಿರುವ ರಾಜ್ ಬಿ ಶೆಟ್ಟಿ ಅವರ ಅಭಿನಯ ಈ ಚಿತ್ರಕ್ಕೆ ವಿಶೇಷ ಆಕರ್ಷಣೆಯಾಗಿದೆ. ಟ್ರೈಲರ್ ಬಿಡುಗಡೆಯೊಂದಿಗೆ ಸಿನಿಮಾ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. ಪವರ್‌ ಫುಲ್ ಡೈಲಾಗ್‌ಗಳು, ಆಕ್ಷನ್‌ ದೃಶ್ಯಗಳು ಹಾಗೂ ಸ್ಟೈಲಿಶ್ ಪ್ರೆಸೆಂಟೇಶನ್‌ ಟ್ರೈಲರ್‌ನಲ್ಲೇ ಪ್ರೇಕ್ಷಕರ ಗಮನ ಸೆಳೆಯುತ್ತವೆ.

ಅರ್ಜುನ್ ಜನ್ಯ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಹೊಸ ಪ್ರಯೋಗಗಳೊಂದಿಗೆ ಕನ್ನಡ ಚಿತ್ರರಂಗಕ್ಕೆ ಹೊಸ ಅನುಭವ ನೀಡಲಿದೆ ಎನ್ನುವ ವಿಶ್ವಾಸ ಅಭಿಮಾನಿಗಳಲ್ಲಿದೆ. 45 ಸಿನಿಮಾ ಪ್ರೇಕ್ಷಕರಿಗೆ ಒಂದು ವಿಭಿನ್ನ ಸಿನಿಮಾ ಅನುಭವ ನೀಡಲಿದೆ ಎಂಬ ನಿರೀಕ್ಷೆ ಎಲ್ಲೆಡೆ ವ್ಯಕ್ತವಾಗಿದೆ.

Edited By : Suman K
PublicNext

PublicNext

17/12/2025 05:10 pm

Cinque Terre

32.54 K

Cinque Terre

0

ಸಂಬಂಧಿತ ಸುದ್ದಿ