ಶಿವಮೊಗ್ಗ: ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ರಚನಾ (20) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ರಚನಾ ತಾಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು. ಕಾಲೇಜಿನಿಂದ ಮನೆಗೆ ಬಂದ ಬಳಿಕ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು ಆಗಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
17/12/2025 06:12 pm
LOADING...