ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣವನ್ನು ಹಾಕದೇ ಸದನಕ್ಕೆ ಸುಳ್ಳು ಹೇಳಿದ್ದಾರೆಂದು ಆರೋಪಿಸಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿಗರು ಸರ್ಕಾರದ ವಿರುದ್ಧ ಮುಗಿಬಿದ್ದರು.. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಶಾಸಕ ಸುನಿಲ್ ಕುಮಾರ್ ಅವರು ಮಾತನಾಡಿ- ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದರು. ಈ ವೇಳೆ ಎದ್ದು ನಿಂತ ಡಿಸಿಎಂ ಡಿ. ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶಿಸಿ, ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ವಿರೋಧ ಪಕ್ಷಗಳಿಗೆ ಚಾಟಿ ಬೀಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲು ಸಾಧ್ಯವಾಗದ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಒಫ್ಪಿಕೊಳ್ಳಿ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರುಮಾಡಿದ ಟೀಕೆಗೆ ಶಿವಕುಮಾರ್ ಅವರು ತಿರುಗೇಟು ನೀಡಿದರು.
ಜನ ಪ್ರತಿನಿಧಿಯಾಗಿ ಮಹೇಶ್ ಟೆಂಗಿನಕಾಯಿ ಅವರು ತಮ್ಮ ಕ್ಷೇತ್ರದ ಜನರ ಅಭಿಪ್ರಾಯದ ಆಧಾರದ ಮೇಲೆ ಇಲ್ಲಿ ಪ್ರಶ್ನೆ ಕೇಳಿದ್ದಾರೆ. ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದಾಗಲೂ ನಾನು ಇದ್ದೆ. ಅವರು ಕಂತುಗಳ ಆಧಾರದ ಮೇಲೆ ಹಣ ಪಾವತಿಯಾಗಿರುವುದರ ಬಗ್ಗೆ ಉತ್ತರ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳವರೆಗೆ ಬಿಡುಗಡೆಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ಮಧ್ಯೆ 2 ತಿಂಗಳು ಬಂದಿಲ್ಲ ಎಂಬುದರ ಬಗ್ಗೆ ಪ್ರಶ್ನೆ ಎತ್ತಿದ್ದು, ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿದ್ದಾರೆ” ಎಂದರು.
ಈ ಮಧ್ಯೆ ಬಿಜೆಪಿ ಶಾಸಕ ಸುನಿಲ್ ಅವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಒಪ್ಪಿಕೊಳ್ಳಿ ಎನ್ನುತ್ತಿದ್ದಾರೆ. ನಿಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರ ಸರ್ಕಾರದಲ್ಲಿ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡಿಸಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಿಸಿದರು. ಅದರ ಆಧಾರದ ಮೇಲೆ ಸಿಎಂ ಆಗಿದ್ದ ಬೊಮ್ಮಾಯಿ ಅವರು ತಮ್ಮ ಬಜೆಟ್ ನಲ್ಲೂ ಹಣ ಘೋಷಿಸಿದರು. ಇದುವರೆಗೂ ಆ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ.
ಇನ್ನು ನರೇಗಾ ಯೋಜನೆ ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಸಾವಿರಾರು ಕೋಟಿ ಹಣ ನೀಡುವುದು ಬಾಕಿ ಇದೆ. ಹಾಗೆಂದು ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎಂದು ನಾವು ಹೇಳಲು ಆಗುವುದಿಲ್ಲ” ರಂದು ಹರಿಹಾಯ್ದರು.
PublicNext
17/12/2025 06:53 pm