ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಸದನಕ್ಕೆ ಗೈರಾದ ಮುಖ್ಯಮಂತ್ರಿಗಳು, ವೈದ್ಯರ ಸಲಹೆಯಂತೆ ಬೆಳಗಾವಿ ಸರ್ಕೀಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಂಜೆಯವರೆಗೆ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಮುಖ್ಯಮಂತ್ರಿಗಳ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ, ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಕ್ಷಣವೇ ಸರ್ಕೀಟ್ ಹೌಸ್‌ಗೆ ಧಾವಿಸಿ ತಂದೆಯ ಆರೋಗ್ಯ ವಿಚಾರಿಸಿದರು. ಇದೇ ವೇಳೆ, ವಿವಿಧ ಪಕ್ಷಗಳ ಹಲವು ನಾಯಕರು ಸಹ ಸಿಎಂ ಆರೋಗ್ಯ ವಿಚಾರಿಸಲು ಭೇಟಿ ನೀಡಿದರು.
ನಿರ್ದಿಷ್ಟವಾಗಿ, ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಏಕಾಂಗಿಯಾಗಿ ಬಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿಗಳನ್ನು ಭೇಟಿಯಾದ ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ, "ಇದು ಕೇವಲ ಸೌಜನ್ಯದ ಭೇಟಿ ಅಷ್ಟೇ. ಸಿಎಂ ಅವರಿಗೆ ಧೈರ್ಯ ಹೇಳುವ ಅವಶ್ಯಕತೆಯಿಲ್ಲ, ಅವರೇ ನಮಗೆ ಧೈರ್ಯ ಹೇಳುವಷ್ಟು ಗಟ್ಟಿಯಾಗಿದ್ದಾರೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ" ಎಂದು ಸ್ಪಷ್ಟಪಡಿಸಿದರು. ಇದೇ ಸಂದರ್ಭದಲ್ಲಿ ಶಾಸಕ ಜಿ. ಟಿ. ದೇವೇಗೌಡ ಕೂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
PublicNext
17/12/2025 07:43 pm
LOADING...