ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಟರ್ಫ್ ಕ್ಲಬ್ ಸುತ್ತಮುತ್ತ 'ಗ್ಲಾಂಡರ್ಸ್' ಭೀತಿ - 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆಗಳ ಓಡಾಟಕ್ಕೆ ಬ್ರೇಕ್!

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆಗಳಿಗೆ ಮಾರಕವಾದ 'ಗ್ಲಾಂಡರ್ಸ್' ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿ ಸಭೆಯ ಬಳಿಕ, ಟರ್ಫ್ ಕ್ಲಬ್ ಅನ್ನು ರೋಗದ 'ಕೇಂದ್ರೀಕೃತ ಸ್ಥಳ' (Epicentre) ಎಂದು ಘೋಷಿಸಲಾಗಿದೆ. ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ 2009 ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ರೋಗ ಹರಡುವಿಕೆಯನ್ನು ತಡೆಗಟ್ಟುವುದು ಇದರ ಮುಖ್ಯ ಉದ್ದೇಶವಾಗಿದೆ.

​ಈ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಸುತ್ತಮುತ್ತಲಿನ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ ಮತ್ತು ಹೇಸರಕತ್ತೆಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳು, ಮದುವೆಯಂತಹ ಶುಭ ಕಾರ್ಯಗಳು ಅಥವಾ ಮನೋರಂಜನಾ ಉದ್ದೇಶಗಳಿಗಾಗಿ ಈ ಪ್ರಾಣಿಗಳನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಗ್ಲಾಂಡರ್ಸ್ ರೋಗವು ಅತ್ಯಂತ ವೇಗವಾಗಿ ಹರಡುವ ಗುಣ ಹೊಂದಿದ್ದು, ಪ್ರಾಣಿಗಳಿಂದ ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ಕುದುರೆ ಮಾಲೀಕರು ಈ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಸೂಚಿಸಿದೆ.

Edited By : Nagaraj Tulugeri
Kshetra Samachara

Kshetra Samachara

17/12/2025 08:57 pm

Cinque Terre

420

Cinque Terre

0

ಸಂಬಂಧಿತ ಸುದ್ದಿ