ಶಿವಮೊಗ್ಗ : ಹೊಸನಗರ ತಾಲೂಕಿನ ಆನೆಗದ್ದೆ ಗ್ರಾಮದಲ್ಲಿ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ಎರಡು ಕಡೆ ದಿಢೀರ್ ದಾಳಿ ನಡೆಸಿ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಕ್ರಮ ಮದ್ಯ ಮಾರಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆನೆಗದ್ದೆ ಗ್ರಾಮದ ಆನಂದ್ ಹಾಗೂ ವೀರೇಶ್ ಎಂಬುವವರ ದಿನಸಿ ಅಂಗಡಿಯ ಮುಂಭಾಗ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ನೀಡಿರುವುದು ಅಬಕಾರಿ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Kshetra Samachara
17/12/2025 09:55 pm
LOADING...