ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ನಮ್ಮ ತಾಂಡಾಗಳಿಗೆ ಬಂದಾಗ ಸಮಾಜ ತನ್ನ ತಾಕತ್ತು ಏನೆಂಬುದನ್ನು ತೋರಿಸಲಿದೆ ಎಂದು ಚಿತ್ರದುರ್ಗ ಬಂಜಾರ ಪೀಠದ ಸರ್ದಾರ್ ಸ್ವಾಮೀಜಿ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪರಿಶಿಷ್ಟ ಜಾತಿ (SC) ಒಳ ಮೀಸಲಾತಿ ನಿರ್ಧಾರವನ್ನು ವಿರೋಧಿಸಿ, ಬೆಳಗಾವಿಯಲ್ಲಿ ಬಂಜಾರ ಸಮಾಜದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.
ಈ ವೇಳೆ ಮಾತನಾಡಿದ ಚಿತ್ರದುರ್ಗ ಬಂಜಾರ ಪೀಠದ ಸರ್ದಾರ್ ಸ್ವಾಮೀಜಿ, “ಬಂಜಾರ ಸಮಾಜ ಇಂದಿಗೂ ಸ್ವಂತ ಭೂಮಿ ಮತ್ತು ಹಕ್ಕಿನ ಉದ್ಯೋಗದಿಂದ ವಂಚಿತವಾಗಿದೆ. ಸಿದ್ದರಾಮಯ್ಯ ಸರ್ಕಾರ ಯಾರೋ ಕೆಲವರ ಒತ್ತಡಕ್ಕೆ ಮಣಿದು ನಮಗೆ ಅನ್ಯಾಯ ಮಾಡುತ್ತಿದೆ. ಈ ಸಮಾಜಕ್ಕೆ ಅನ್ಯಾಯ ಮಾಡಿದವರು ಯಾರೂ ಅಧಿಕಾರದಲ್ಲಿ ಉಳಿದಿಲ್ಲ ಎಂಬುದು ನೆನಪಿರಲಿ. ಕೇವಲ ಎ, ಬಿ, ಸಿ, ಡಿ ಗುಂಪುಗಳನ್ನು ಮಾಡಿ ನೀಡಿರುವ ಮೀಸಲಾತಿ ನಮಗೆ ಒಪ್ಪಿಗೆಯಿಲ್ಲ. ಮುಂದಿನ ಚುನಾವಣೆಯಲ್ಲಿ ನಮ್ಮ ತಾಂಡಾಗಳಿಗೆ ಬಂದಾಗ ಸಮಾಜ ತನ್ನ ತಾಕತ್ತು ಏನೆಂಬುದನ್ನು ತೋರಿಸಲಿದೆ" ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಸಮಾಜದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟಕ್ಕೆ ಬರಬೇಕೆಂದು ಕರೆ ನೀಡಿದರು.
PublicNext
17/12/2025 10:08 pm
LOADING...