ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಸರಕಾರಿ ಕಾಲೇಜು ಕ್ಯಾಂಪಸ್‌ನಲ್ಲಿ ರಸ್ತೆ ನಿರ್ಮಿಸಿದ ಖಾಸಗಿ ವ್ಯಕ್ತಿ - ವಿದ್ಯಾರ್ಥಿಗಳ ಆಕ್ರೋಶ

ಬೈಂದೂರು: ಕಾಲೇಜು ಜಾಗದಲ್ಲಿ ಖಾಸಗಿ ವ್ಯಕ್ತಿ ರಸ್ತೆ ನಿರ್ಮಿಸಿರುವ ಬಗ್ಗೆ ವರದಿಯಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರಸ್ತೆ ನಿರ್ಮಿಸಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆ ನಿರ್ಮಿಸಿದ ಖಾಸಗಿ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಲೇಜು ಪ್ರಾಂಶುಪಾಲರು ತಹಶೀಲ್ದಾರ್‌ಗೆ ಮನವಿ ಮಾಡಿದ್ದಾರೆ. ಕಾಲೇಜು ರಜೆ ಇದ್ದ ಸಮಯದಲ್ಲಿ ಈ ರಸ್ತೆಯನ್ನು ನಿರ್ಮಿಸಲಾಗಿದೆ. ಈ ರಸ್ತೆಯನ್ನು ತೆರವುಗೊಳಿಸಿದಿದ್ರೆ ಕಾಲೇಜು ಜಾಗ ಉಳಿಸಲು ಹೋರಾಟ ಮಾಡೋದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

ಮಹಾಬಲ ದೇವಾಡಿಗ ಎಂಬಾತನೇ ಕಾಲೇಜು ಜಾಗದಲ್ಲಿ ರಸ್ತೆ ನಿರ್ಮಿಸಿದ್ದಾನೆ. ಈ ಬಗ್ಗೆ ಆತ ಯಾರಿಗೂ ಮಾಹಿತಿ ನೀಡಿಲ್ಲ. ಮಹಾಬಲ ದೇವಾಡಿಗ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಾಲೇಜಿನ ಆವರಣದಲ್ಲಿನ ಮರ ತೆರವುಗೊಳಿಸಲು ಬಳಸಲಾದ ಜೆಸಿಬಿಯನ್ನು ಯಾಕೆ ವಶಕ್ಕೆ ಪಡೆದಿಲ್ಲ ಎಂಬ ಪ್ರಶ್ನೆ ಎದ್ದಿದೆ. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Edited By : Shivu K
PublicNext

PublicNext

17/12/2025 10:24 pm

Cinque Terre

11.12 K

Cinque Terre

0

ಸಂಬಂಧಿತ ಸುದ್ದಿ