ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೌರಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ - ಡಾ. ರಾಜೇಂದ್ರ ಕೆ.ವಿ

ಬೆಂಗಳೂರು: ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವಂತೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಡಿಯೂರು ಉಪವಿಭಾಗ ವ್ಯಾಪ್ತಿಯಲ್ಲಿ ಇಂದು ನಾಗರಿಕರಿಗೆ ಮೂಲಸೌಕರ್ಯ ಹಾಗೂ ನೀಡುತ್ತಿರುವ ಸೇವೆಗಳ ಸ್ಥಿತಿಗತಿಗಳನ್ನು ಪರಿಶೀಲಿಸುವ ವೇಳೆ, ಪೌರಕಾರ್ಮಿಕರ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಅವರ ಅಹವಾಲುಗಳನ್ನು ಖುದ್ದಾಗಿ ಆಲಿಸಿದರು. ಬಳಿಕ ಎಲ್ಲಾ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಮಸ್ಟರಿಂಗ್ ಸ್ಥಳ ಪರಿಶೀಲನೆ ವೇಳೆ ಪೌರಕಾರ್ಮಿಕರ ಹಾಜರಾತಿಯನ್ನು ಪರಿಶೀಲಿಸಿ, ಸಮಯಪಾಲನೆ ಮಾಡುವಂತೆ ಪೌರಕಾರ್ಮಿಕರಿಗೆ ಸೂಚಿಸಿದರು. ಅಲ್ಲದೇ, ಪೌರಕಾರ್ಮಿಕರಿಗೆ ದೊರೆಯಬೇಕಾದ ಎಲ್ಲಾ ಕಲ್ಯಾಣ ಸೌಲಭ್ಯಗಳು ದೊರೆಯುವಂತೆ ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಜೈವಿಕ ಅನಿಲ ಘಟಕ, ಸಾರ್ವಜನಿಕ ಉದ್ಯಾನವನಗಳು, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ನಾಷಿಯಂ ಹಾಗೂ ಗೊಬ್ಬರ ತಯಾರಿಕಾ ಘಟಕಗಳನ್ನು ಪರಿಶೀಲಿಸಿದರು.

ಈ ವೇಳೆ ಮುಖ್ಯ ಅಭಿಯಂತರರಾದ ವಿಶ್ವನಾಥ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

17/12/2025 10:26 pm

Cinque Terre

1.13 K

Cinque Terre

0

ಸಂಬಂಧಿತ ಸುದ್ದಿ