ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಒಳ ಮೀಸಲಾತಿಗೆ ಬಂಜಾರ ಸಮಾಜ ವಿರೋಧ; ಸರ್ಕಾರದ ವಿರುದ್ಧ ಪ್ರತಿಭಟನೆ ಸಮಾವೇಶ

ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪರಿಶಿಷ್ಟ ಜಾತಿ (SC) ಒಳ ಮೀಸಲಾತಿ ನಿರ್ಧಾರವನ್ನು ವಿರೋಧಿಸಿ, ಬೆಳಗಾವಿಯಲ್ಲಿ ಬಂಜಾರ ಸಮಾಜದ ವತಿಯಿಂದ ಇಂದು ಬೃಹತ್ ಪ್ರತಿಭಟನೆ ಸಮಾವೇಶ ನಡೆಯಿತು.

ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಒಳ ಮೀಸಲಾತಿ ಜಾರಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸರ್ಕಾರ ತಕ್ಷಣವೇ ತನ್ನ ಆದೇಶವನ್ನು ಹಿಂಪಡೆದು, ಪುನರ್ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಂಸದ ಉಮೇಶ್ ಜಾಧವ್, ನಾಗಮೋಹನ ದಾಸ್ ವರದಿ ಜಾರಿಗೆ ಬಂದಿದೆ. ಆದರೆ, ಸರ್ಕಾರ ಈ ವರದಿಯನ್ನು ಸಂಪೂರ್ಣವಾಗಿ ಹಿಂಬಾಲಿಸಿಲ್ಲ. ಈ ವರದಿಯಲ್ಲಿ ಬಹಳಷ್ಟು ಗೊಂದಲಗಳಿವೆ. ಅದರಲ್ಲಿ ಸ್ಪಶ್ಯರು ಮತ್ತು ಅಸ್ಪೃಶ್ಯರು ಅಂತ ಮಾಡಿದಾಗ ಸರಿಯಾಗಿ ಗಣತಿಯಲ್ಲಿ ತೆಗೆದುಕೊಂಡಿಲ್ಲ. ಇದನ್ನು ಸರಿಪಡಿಸಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದಂತೆ ಸರ್ಕಾರ ನೋಡಿಕೊಳ್ಳಬೇಕು. ಈ ರೀತಿಯಾಗಿ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಡ್ತಾ ಇದೀವಿ ಎಂದು ಹೇಳಿದರು.

Edited By :
PublicNext

PublicNext

18/12/2025 07:49 am

Cinque Terre

5.38 K

Cinque Terre

0

ಸಂಬಂಧಿತ ಸುದ್ದಿ