ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಳು ಹೇಳಿದ ಸಚಿವೆಯ ಕ್ಷಮೆಗೆ ಆಗ್ರಹಿಸಿ ಸದನದ ಬಾವಿಗಿಳಿದ ಬಿಜೆಪಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸದನಕ್ಕೆ ಸುಳ್ಳು ಹೇಳಿದ್ದಾರೆ. ಆಗಸ್ಟ್ ತಿಂಗಳವರೆಗೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೊಡಲಾಗಿದೆ ಎಂದು ಸದನದಲ್ಲಿ ಹೇಳಿದ್ದಾರೆ. ಆದರೆ, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನೇ ಹಾಕದಿರೋದು ಬೆಳಕಿಗೆ ಬಂದಿದೆ! ಹಾಗಾದರೆ, ಆ ಎರಡು ತಿಂಗಳ ಗೃಹಲಕ್ಷ್ಮೀ ಹಣ ಎಲ್ಲಿ ಹೋಯಿತು? ಹೀಗಂತ ಪ್ರಶ್ನಿಸಿ ಪ್ರತಿಪಕ್ಷಗಳ ಸದಸ್ಯರು ಇಂದು ವಿಧಾನಸಭೆ ಅಧಿವೇಶನದಲ್ಲಿ ಕಲಾಪವನ್ನು ಬಹಿಷ್ಕರಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿ, ಸಚಿವರು ಆ ಬಗ್ಗೆ ಸ್ಪಷ್ಟಪಡಿಸಲು ಮತ್ತು ನಿಮ್ಮ ಪ್ರಶ್ನೆಗೆ ಉತ್ತರಿಸಲು ಇದೀಗ ಸಿದ್ಧರಿದ್ದಾರೆ. ನೀವೆಲ್ಲ ನಿಮ್ಮ ನಿಮ್ಮ ಆಸನಗಳಿಗೆ ತೆರಳಬೇಕೆಂದು ಮನವಿ ಮಾಡಿಕೊಂಡರು. ಆದರೆ, ಸ್ಪೀಕರ್ ಅವರ ಮನವಿಗೆ ಸೊಪ್ಪು ಹಾಕದ ಬಿಜೆಪಿ ಸದಸ್ಯರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕ್ಷಮೆ ಕೇಳುವಂತೆ ಪಟ್ಟು ಹಿಡಿದರು.

Edited By :
PublicNext

PublicNext

18/12/2025 08:20 am

Cinque Terre

6.38 K

Cinque Terre

0

ಸಂಬಂಧಿತ ಸುದ್ದಿ