ಬೆಂಗಳೂರು : ನಗರದ ಆರ್.ಎಂ.ವಿ. ಎಕ್ಸ್ಟೆನ್ಷನ್ ಬಳಿ ಅತಿವೇಗದ ಕಾರು ಸರಣಿ ಅಪಘಾತಕ್ಕೀಡಾಗಿ ವಕೀಲರೊಬ್ಬರ ಜೀವ ಬಲಿತೆಗೆದುಕೊಂಡಿದೆ ಹಲವರಿಗೆ ಗಂಭೀರ ಗಾಯಗಳಾಗಿವೆ.
ಆರ್.ಎಂ.ವಿ. ಎಕ್ಸ್ಟೆನ್ಷನ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಸಿಯಾಜ್ ಕಾರು ಮೊದಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವೃದ್ಧ ಚಂದ್ರಶೇಖರ ರೆಡ್ಡಿ (64) ಅವರಿಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಚಂದ್ರಶೇಖರ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ನಿಯಂತ್ರಣ ಕಳೆದುಕೊಂಡ ಕಾರು, ಆರ್.ಎಂ.ವಿ. ಕ್ಲಬ್ ಪಾರ್ಕಿಂಗ್‌ನಲ್ಲಿದ್ದ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದಿದೆ. ಆನಂತರ ಐದಾರು ಬೈಕ್‌ಗಳಿಗೂ ಗುದ್ದಿ ನಿಂತಿದೆ.
ದುರಂತದಲ್ಲಿ ಸಾವನ್ನಪ್ಪಿದ ವೃದ್ಧ ಪಾದಾಚಾರಿ ಚಂದ್ರಶೇಖರ ರೆಡ್ಡಿ (64) ಅವರು ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಯುವಕ-ಯುವತಿಯರಿಗೆ ಗಂಭೀರ ಗಾಯಗಳಾಗಿದ್ದು, ಕಾರಿನಲ್ಲಿ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ರಭಸಕ್ಕೆ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಕೂಡಲೇ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಸಂಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
PublicNext
18/12/2025 08:55 am
LOADING...