ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತಿರುಪತಿ ಭಕ್ತರಿಗೆ ಗುಡ್ ನ್ಯೂಸ್ - ಮಂಗಳೂರಿನಿಂದ ನೇರ ವಿಮಾನಕ್ಕೆ ಮನವಿ!

ಉಡುಪಿ: ಉಡುಪಿ, ಮಂಗಳೂರು, ಮಲೆನಾಡು ಹಾಗೂ ಗಡಿನಾಡು ಕಾಸರಗೋಡು ಸೇರಿದಂತೆ ಕರಾವಳಿ ಭಾಗದಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ, ಮಂಗಳೂರು ವಿಮಾನ ನಿಲ್ದಾಣದಿಂದ ತಿರುಪತಿಗೆ ನೇರ ವಿಮಾನ ಸೇವೆ ಒದಗಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಪೂಜಾರಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಮಂಜುನಾಥ್ ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

18/12/2025 11:16 am

Cinque Terre

6.54 K

Cinque Terre

0

ಸಂಬಂಧಿತ ಸುದ್ದಿ