ಬೆಳಗಾವಿ: ಗಾಂಧಿ, ನೆಹರು, ಅಂಬೇಡ್ಕರ್ ಜೊತೆಗೆ ಬಡವರು ಕಂಡರೆ ಬಿಜೆಪಿಯವರಿಗೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆಯ ಬಳಿ ಇಂದು ಬೆಳಗ್ಗೆ ಕೇಂದ್ರದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಧರಣಿಯಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗವಾದಂತಾಗಿದೆ ಎಂದರು.
2012 ರಲ್ಲಿ ಸುಬ್ರಹ್ಮಣ್ಯ ಸ್ವಾಮಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಮತ್ತಿತರ ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿ ದಾಖಲಿಸಿದ್ದ ಎಫ್ ಐಆರ್ ಮತ್ತು ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ ಎಂದರು.
PublicNext
18/12/2025 11:29 am
LOADING...