ಹೈದರಾಬಾದ್: ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ, ನಿರ್ದೇಶಕ ಮಾರುತಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಚಿತ್ರದ ಎರಡನೇ ಹಾಡು ‘ಸಹನಾ ಸಹನಾ…’ ಬುಧವಾರ ಹೈದರಾಬಾದ್‌ನಲ್ಲಿ ಬಿಡುಗಡೆಯಾಯಿತು.
ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮವನ್ನು ಹೈದರಾಬಾದ್‌ನ ಒಂದು ಮಾಲ್‌ನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಮೆಲೋಡಿ ಹಾಡನ್ನು ಲೋಕಾರ್ಪಣೆ ಮಾಡಲಾಯಿತು.ಹಾರರ್–ಕಾಮಿಡಿ ಜಾನರ್‌ನ ಈ ಚಿತ್ರವನ್ನು ನಿರ್ಮಾಪಕರಾದ ಟಿ.ಜಿ. ವಿಶ್ವಪ್ರಸಾದ್ ಮತ್ತು ಕೃತಿ ಪ್ರಸಾದ್ ಅವರು ಭಾರೀ ವೆಚ್ಚದಲ್ಲಿ ನಿರ್ಮಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಥಮನ್ ಎಸ್,ರಾಜಾ ಸಾಬ್ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿ ಮೂಡಿಬಂದಿವೆ. ಈಗಾಗಲೇ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ‘ಸಹನಾ ಸಹನಾ’ ಎಂಬ ಹಾಡನ್ನು ಪ್ರೇಕ್ಷಕರ ಮುಂದೆ ತಂದಿದ್ದೇವೆ. ಈ ಹಾಡಿನಲ್ಲಿ ಪ್ರಭಾಸ್ ಅವರ ಡ್ಯಾನ್ಸ್ ಮತ್ತು ಸ್ಟೈಲ್ ಅಭಿಮಾನಿಗಳಿಗೆ ಖಂಡಿತ ಖುಷಿ ನೀಡಲಿದೆ,” ಎಂದರು.
ನಿರ್ದೇಶಕ ಮಾರುತಿ ಮಾತನಾಡುತ್ತಾ,ಪ್ರಭಾಸ್ ಅವರು ಯಾವಾಗಲೂ ತಮ್ಮ ಅಭಿಮಾನಿಗಳಿಗಾಗಿ ವಿಶೇಷ ಶ್ರಮ ಹಾಕುತ್ತಾರೆ. ಈ ಸಂಕ್ರಾಂತಿ ‘ರೆಬೆಲ್ ಸಂಕ್ರಾಂತಿ’ ಆಗಲಿದೆ. ಚಿತ್ರದ ವಿಷಯಕ್ಕೆ ಜನ ನೀಡುತ್ತಿರುವ ಪ್ರೀತಿಗೆ ಧನ್ಯವಾದಗಳು,” ಎಂದು ಹೇಳಿದರು.ನಿರ್ಮಾಪಕ ಟಿ.ಜಿ. ವಿಶ್ವಪ್ರಸಾದ್ ಮಾತನಾಡಿ,ಚಿತ್ರದ ಬಿಡುಗಡೆಯ ದಿನಾಂಕದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಮಾಹಿತಿ ನೀಡುತ್ತೇವೆ. ಹೈದರಾಬಾದ್‌ನಲ್ಲಿ ದೊಡ್ಡ ಮಟ್ಟದ ಪ್ರಿ-ರಿಲೀಸ್ ಕಾರ್ಯಕ್ರಮ ನಡೆಸುವ ಯೋಜನೆ ಇದೆ. ಜನವರಿ 8 ರಿಂದ ಪ್ರೀಮಿಯರ್ ಶೋಗಳು ಆರಂಭವಾಗಲಿವೆ,” ಎಂದು ತಿಳಿಸಿದರು.ಈ ವೇಳೆ ಚಿತ್ರದ ನಾಯಕಿಯರಾದ ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ಅವರು ಪ್ರಭಾಸ್ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು.
PublicNext
18/12/2025 02:08 pm