ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಡಿ.21 ರಿಂದ ಪಲ್ಸ್ ಪೋಲಿಯೋ - 59 ಹಳ್ಳಿಗಳಲ್ಲಿ 13, 648 ಮಕ್ಕಳಿಗೆ ಲಸಿಕೆ

ಕುಂದಗೋಳ : ತಾಲೂಕಿನಾದ್ಯಂತ ಡಿ. 21ರಿಂದ 24 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ ನಡೆಯುತ್ತಿದ್ದು, ಅಧಿಕಾರಿಗಳು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಯಶಸ್ವಿಗೊಳಿಸುವಂತೆ ತಹಸೀಲ್ದಾರ್ ರಾಜು ಮಾವರಕರ ಹೇಳಿದರು.

ಕುಂದಗೋಳ ಪಟ್ಟಣದ ತಹಸೀಲ್ದಾ‌ರ್ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪೋಲಿಯೋ ಮುಕ್ತ ಭಾರತವನ್ನಾಗಿಸುವ ನಿಟ್ಟಿನಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಪೂರ್ಣ ಸಹಕಾರ ನೀಡುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದ ಕುರಿತು ಆರೋಗ್ಯ ನಿರೀಕ್ಷಣಾ ಅಧಿಕಾರಿ ವೀರೇಶ ಅಂಗಡಿ ಮಾತನಾಡಿ ಡಿ.21 ರಿಂದ ಪಲ್ಸ್ ಪೋಲಿಯೋ ಅಭಿಯಾನ ಜರುಗಲಿದ್ದು, ತಾಲೂಕಿನ ಒಟ್ಟು 59 ಹಳ್ಳಿಗಳಲ್ಲಿ ಈ ಲಸಿಕಾ ಪ್ರಕ್ರಿಯೆ ನಡೆಯಲಿದೆ.

ಐದು ವರ್ಷದೊಳಗಿನ ಒಟ್ಟು 13,648 ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ತಾಲೂಕಿನಾದ್ಯಂತ ಒಟ್ಟು 99 ಲಸಿಕಾ ಬೂತ್‌' ಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 396 ಸದಸ್ಯರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿವರಿಸಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ರಾಜೇಂದ್ರಗೌಡ್ರ ಮಾತನಾಡಿದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಶ್ರೀಧರ್ ಪೂಜಾರ, ಪಬ್ಲಿಕ್ ನೆಕ್ಸ್ಟ್, ಕುಂದಗೋಳ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/12/2025 02:16 pm

Cinque Terre

9.45 K

Cinque Terre

0

ಸಂಬಂಧಿತ ಸುದ್ದಿ