ಬೆಂಗಳೂರು: ಮುಂಬರುವ ಪಲ್ಸ್ ಪೋಲಿಯೋ ಅಭಿಯಾನದ ಯಶಸ್ವಿ ಅನುಷ್ಠಾನಕ್ಕಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ಸಿದ್ಧತೆಗಳನ್ನು ಆರಂಭಿಸಿದೆ. ಇಂದು, ಪಾಲಿಕೆಯ ಆಯುಕ್ತರಾದ ಕೆ.ಎನ್. ರಮೇಶ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ವಿಭಾಗದ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಡಿಸೆಂಬರ್ 21, 2025 ರಿಂದ ಡಿಸೆಂಬರ್ 24, 2025 ರವರೆಗೆ ನಡೆಯಲಿರುವ ಈ ಲಸಿಕಾ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
2.23 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ
ಸಭೆಯಲ್ಲಿ ಮಾತನಾಡಿದ ಆಯುಕ್ತ ಕೆ.ಎನ್. ರಮೇಶ್, ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಗತ್ಯವಿರುವ ಬ್ಯಾನರ್‌ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಿದರು. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 21,94,946 ಜನಸಂಖ್ಯೆ ಇದ್ದು, ಈ ಅಭಿಯಾನದ ಪ್ರಮುಖ ಉದ್ದೇಶವೆಂದರೆ, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಒಟ್ಟು **2,23,607 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ** ಎಂದು ತಿಳಿಸಿದರು.
ಅಧಿಕಾರಿಗಳ ಉಪಸ್ಥಿತಿ
ಈ ಮಹತ್ವದ ಸಭೆಯಲ್ಲಿ ಅಪರ ಆಯುಕ್ತ ರಾಚಪ್ಪ, ಆರೋಗ್ಯಾಧಿಕಾರಿ ಬಾಲಸುಂದರ್ ಸೇರಿದಂತೆ ಪಾಲಿಕೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
18/12/2025 02:51 pm
LOADING...