ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಯುವ ಪ್ರತಿಭೆ ಶಗುನ್ ಸಾಧನೆಗೆ ವಿಧಾನಸಭೆಯಲ್ಲಿ ಅಭೂತಪೂರ್ವ ಗೌರವ!

ಉಡುಪಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ, ಭಾರತ U15 ಬಾಲಕಿಯರ ವಾಲಿಬಾಲ್ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಸುವರ್ಣ ಸೌಧದಲ್ಲಿ ಸನ್ಮಾನ

ಸಾರ್ವಜನಿಕರಿಂದ ಕಿಕ್ಕಿರಿದು ತುಂಬಿದ್ದ ಕಲಾಪ ವೀಕ್ಷಣಾ ಗ್ಯಾಲರಿಯ ಮುಂಭಾಗದಲ್ಲಿ ಕುಳಿತಿದ್ದ ಶಗುನ್ ಅವರನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸನ್ಮಾನಿಸಿ, ಅವರ ಸಾಧನೆಯನ್ನು ಗುಣಗಾನ ಮಾಡಿದರು. ಈ ಸಾಧನೆಗೆ ಅಭಿನಂದನೆ ಸಲ್ಲಿಸುತ್ತಿದ್ದಂತೆ, ಶಗುನ್ ಎದ್ದು ನಿಂತು ಸಭಾಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದರು. ಆಗ ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಹಾಗೂ ಶಾಸಕರು ಮೇಜು ತಟ್ಟಿ ಬಾಲಕಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಕಚೇರಿಗಳಲ್ಲಿ ಗೌರವ

ಕಲಾಪದ ನಂತರ, ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಕಚೇರಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ಕಚೇರಿಯಲ್ಲಿ ಶಗುನ್ ವರ್ಮ ಅವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅವರಿಗೆ ಶುಭಾಶೀರ್ವಾದವನ್ನೂ ಮಾಡಲಾಯಿತು.

ಗಣ್ಯರ ಉಪಸ್ಥಿತಿ

ಈ ಗೌರವ ಸಮಾರಂಭದಲ್ಲಿ ಹಿರಿಯ ಸಚಿವರಾದ ಬೋಸರಾಜ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಕುಣಿಗಲ್ ಶಾಸಕ ರಂಗನಾಥ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್, ಸಾಮಾಜಿಕ ಧುರೀಣ ಸುಗ್ಗಿ ಸುಧಾಕರ್ ಶೆಟ್ಟಿ, ಸಂದೇಶ್ ವರ್ಮ, ತರಬೇತುದಾರ ಜೀವನ್ ಡಿಸಿಲ್ವಾ, ರಾಮ್ ಪ್ರಸಾದ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Edited By : Suman K
PublicNext

PublicNext

18/12/2025 03:03 pm

Cinque Terre

8.79 K

Cinque Terre

0

ಸಂಬಂಧಿತ ಸುದ್ದಿ