ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಲಾಯಿತು. ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಅವರು ಈ ಪ್ರಶಸ್ತಿಯನ್ನು ಹಸ್ತಾಂತರಿಸಿದರು.
ಈ ಗೌರವವನ್ನು ಪಡೆದ ಮೊದಲ ಜಾಗತಿಕ ನಾಯಕ (ದೇಶವೊಂದರ ಮುಖ್ಯಸ್ಥ) ನರೇಂದ್ರ ಮೋದಿ ಆಗಿದ್ದಾರೆ. ಇದು ಮೋದಿ ಅವರಿಗೆ ದೊರೆತ 28ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ, ಮೋದಿ ಅವರು ‘ಎಕ್ಸ್’ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿ, ‘ಈ ಪ್ರಶಸ್ತಿಯನ್ನು ಭಾರತದ 140 ಕೋಟಿ ನಾಗರಿಕರಿಗೆ ಅರ್ಪಿಸುತ್ತೇನೆ’ ಎಂದು ತಿಳಿಸಿದ್ದಾರೆ.
PublicNext
18/12/2025 04:13 pm
LOADING...