ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೈಟ್ ಟಾಪಿಂಗ್ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ - ಪೊಮ್ಮಲ ಸುನೀಲ್ ಕುಮಾರ್

ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ರೈತರ ಸಂತೆ, ಸಹಕಾರ ನಗರ ಮತ್ತು ಮಾಲ್ ಆಫ್ ಏಷ್ಯಾ ಸಮೀಪ ವೈಟ್ ಟಾಪಿಂಗ್ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿದ ಆಯುಕ್ತರು ಗುಣಮಟ್ಟ ಕಾಪಾಡಿಕೊಂಡು ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಹಕಾರನಗರ 20ನೇ ಮುಖ್ಯ ರಸ್ತೆ ಸ್ಥಳದಲ್ಲಿ ವೈಟ್‌ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ವೇಳೆ ವಿಳಂಬದಿಂದ ಕಾಮಗಾರಿ ಪೂರ್ಣಗೊಳ್ಳಲು ಅಡಚಣೆ ಆಗುತ್ತಿರುವುದರಿಂದ, ಜಲಮಂಡಳಿಯ ಕಾರ್ಯಪಾಲಕ ಅಭಿಯಂತರರಿಗೆ ಕಾಮಗಾರಿಗಳನ್ನು ವೇಗಗೊಳಿಸುವಂತೆ ಸೂಚಿಸಿದರು.

ಈ ವೇಳೆ ಜಂಟಿ ಆಯುಕ್ತರು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, B-SMILE ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮತ್ತಿತರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

18/12/2025 06:13 pm

Cinque Terre

138

Cinque Terre

0

ಸಂಬಂಧಿತ ಸುದ್ದಿ