ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಂಗಭದ್ರಾ ಅಣೆಕಟ್ಟು ಎಲ್ಲ ಗೇಟ್ ಗಳ ಬದಲಾವಣೆ

ಬೆಳಗಾವಿ: 2026ರ ಜೂನ್ ತಿಂಗಳ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲ 33 ಗೇಟ್ ಗಳ ಬದಲಾವಣೆ ಕಾರ್ಯ ಪೂರ್ಣಗೊಳ್ಳಲಿದ್ದು, ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು, ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾಂಗ್ರೆಸ್ ಸದಸ್ಯ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟು ಗೇಟ್ ಗಳ ಬದಲಾವಣೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ವರ್ಷ 19ನೇ ಗೇಟ್ ತುಂಡರಿಸಿದಾಗ ಎಲ್ಲರೂ ಆತಂಕಕ್ಕೆ ಒಳಗಾಗಿದ್ದರು. ನಾನೂ ಗಾಬರಿಯಾಗಿದ್ದೆ. ಆಗ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಜನಾರ್ದನ ರೆಡ್ಡಿ ಸೇರಿದಂತೆ ಅನೇಕರು ನಮ್ಮನ್ನು ಟೀಕೆ ಮಾಡಿದರು. ಆಗ ನಾನು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಕೇವಲ 7 ದಿನಗಳಲ್ಲಿ ಗೇಟ್ ಬದಲಾವಣೆ ಮಾಡಿದೆವು. ನಂತರ ನಾವು ಕೇಂದ್ರ ಜಲ ಆಯೋಗದ ಮಾಜಿ ಮುಖ್ಯಸ್ಥರಾದ ಎಂ.ಕೆ. ಬಜಾಜ್ ಅವರ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಿ, ಇಡೀ ರಾಜ್ಯದ ಎಲ್ಲಾ ಅಣೆಕಟ್ಟುಗಳ ಗೇಟ್ ಗಳ ಪರಿಶೀಲನೆಗೆ ಸೂಚಿಸಿದೆವು. ಈ ಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಟಿಬಿ ಅಣೆಕಟ್ಟಿನ ಎಲ್ಲಾ 33 ಗೇಟ್ ಗಳ ಬದಲಾವಣೆಗೆ ಮುಂದಾಗಿದ್ದು, ಅದಕ್ಕಾಗಿ 52 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ ಎಂದರು.

Edited By : Nirmala Aralikatti
Kshetra Samachara

Kshetra Samachara

18/12/2025 06:17 pm

Cinque Terre

540

Cinque Terre

0

ಸಂಬಂಧಿತ ಸುದ್ದಿ