ಬೆಂಗಳೂರು:ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇದೇ ವೇಳೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಮತ್ತು ಮನೆಯ ಹಕ್ಕು ಪತ್ರಗಳ ವಿತರಣೆಯ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವರಾದ ಬೈರತಿ ಸುರೇಶ್, ರಹೀಂಖಾನ್, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಪೊನ್ನಣ್ಣ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Kshetra Samachara
18/12/2025 07:38 pm
LOADING...