ರೋಹ್ಟಕ್ : ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಭೀಕರ ಘರ್ಷಣೆಯ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಗಳು ಗ್ಯಾಂಗ್‌ಸ್ಟರ್‌ಗಳಂತೆ ವರ್ತಿಸಿದ್ದಾರೆ.
ಕೆಲ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಲ್ಲದೆ, ತಮ್ಮ ವಿರೋಧಿಗಳ ಮೇಲೆ ಕಾರು ಹರಿಸಲು ಯತ್ನಿಸಿದ್ದು, ಅದೃಷ್ಟವಶಾತ್ ಕಾರು ಮರಕ್ಕೆ ಡಿಕ್ಕಿ ಹೊಡೆದ ಕಾರಣ ವಿದ್ಯಾರ್ಥಿಗಳ ಜೀವ ಉಳಿದಿದೆ. ಇಲ್ಲವಾದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಉಪಟಳಕ್ಕೆ ಈ ಘಟನೆ ಮತ್ತೊಂದು ಸೇರ್ಪಡೆಯಾಗಿದೆ. ಓದು ಬಿಟ್ಟು ಇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿರುವ ಬಗ್ಗೆ ಈ ಘಟನೆ ಆತಂಕ ಮೂಡಿಸಿದೆ.
PublicNext
18/12/2025 09:17 pm
LOADING...