ಮಂಗಳೂರು: ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ(23) ಬಂಧಿತ ಆರೋಪಿ.
ಅಭಿಷೇಕ್ mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ Hotel Nisarga ಫೋಟೋ ಅಪ್ಲೋಡ್ ಮಾಡಿ "ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಬಜ್ಪೆ ಪೊಲೀಸರಿಂದ ರಾಜಾತಿಥ್ಯ, ದಿನವೂ ನಿಸರ್ಗ ಹೋಟೆಲ್ ಬಜ್ಪೆಯಿಂದ ಬೀಫ್ ಊಟವನ್ನು ನೀಡುತ್ತಿದ್ದಾರೆ. ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಇಲಾಖೆ ಅಪರಾಧಿಗಳೊಂದಿಗೆ ಸೇರಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಪೊಲೀಸರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ" ಎಂಬುದಾಗಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.
ಅದರನ್ವಯ ಮೇ 8ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರದ ಸಿ.ಇ.ಎನ್ ಪೊಲೀಸ್ ಇಲಾಖೆ ಕೈಗೊಂಡು ಆರೋಪಿಯನ್ನು ಬಂಧಿಸಿದೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ.
ಆರೋಪಿಯ ವಿರುದ್ಧ ಈ ಹಿಂದೆ ಕೊಲೆ, ಕೊಲೆಯತ್ನ, ಹಲ್ಲೆ, ದರೋಡೆ ಸೇರಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ -3, ಕಾಪು ಪೊಲೀಸ್ ಠಾಣೆಯಲ್ಲಿ -1 ಪ್ರಕರಣಗಳು ಸಹ ದಾಖಲಾಗಿರುತ್ತದೆ.
PublicNext
18/12/2025 10:26 pm
LOADING...