ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಪಾಠ ಹೇಳಬೇಕಾದ ಶಾಲಾ ಶಿಕ್ಷಕನೊಬ್ಬ, ವಿದ್ಯಾರ್ಥಿಗಳನ್ನೇ ಬಳಸಿ ರೀಲ್ಸ್ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಶಾಲೆಯ ಆವರಣದಲ್ಲೇ ವಿದ್ಯಾರ್ಥಿಗಳನ್ನು ಹಿಂಡು ಕಟ್ಟಿಕೊಂಡು ರೀಲ್ಸ್ ಮಾಡಿ ಬಿಲ್ಡಪ್ ತೋರಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಡಿದೆ.
ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಪ್ರೌಢ ಶಾಲೆಯ ಶಿಕ್ಷಕ ಶ್ರೀನಿವಾಸ್ ವಾಲಿ ಅವರು ಈ ರೀಲ್ಸ್ ಮಾಡಿದ್ದಾರೆ ಎನ್ನಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆ ಮಾಡಬಾರದು ಎಂದು ಬೋಧನೆ ನೀಡುವ ಶಿಕ್ಷಕನೇ ಈ ರೀತಿ ನಡೆದುಕೊಂಡಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.
ವಿದ್ಯಾರ್ಥಿಗಳ ಜೊತೆ ಬಿಲ್ಡಪ್ ರೀಲ್ಸ್ ಮಾಡಿದ ಶಿಕ್ಷಕನ ನಡೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿಯ ವರ್ತನೆ ಶಿಕ್ಷಕ ವೃತ್ತಿಗೆ ಮಸಿ ಬಳಿದಂತಾಗಿದೆ ಎಂದು ಟೀಕಿಸಿದ್ದಾರೆ.
ಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಹೆಚ್ಚಾಗಿದೆ.
ಬ್ಯೂರೋ ರಿಪೋರ್ಟ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/12/2025 08:51 am
LOADING...