ಬೆಂಗಳೂರು : ಕೆ.ಎಸ್. ಹೇಮಂತ್ ಗೌಡ ಹಾಗೂ ಕೆ.ವಿ. ಸತ್ಯಪ್ರಕಾಶ್ ಅವರ ನಿರ್ಮಾಣದಲ್ಲಿ, ಜಡೇಶ್ ಕೆ. ಹಂಪಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಲ್ಯಾಂಡ್ ಲಾರ್ಡ್” ಚಿತ್ರದ ಮೊದಲ ಹಾಡು ಇತ್ತೀಚೆಗೆ ಭರ್ಜರಿಯಾಗಿ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಶೈಲಿಯಿಂದ ಪ್ರೇಕ್ಷಕರ ಮನಗೆದ್ದಿರುವ
ದುನಿಯಾ ವಿಜಯ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಜೊತೆಗೆ ರಚಿತಾ ರಾಮ್ ಹಾಗೂ ರಿತನ್ಯ ವಿಜಯ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ಹಾಡಿಗೆ ಪ್ರತಿಭಾವಂತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದು, ಹಾಡು ಕೇಳುತ್ತಿದ್ದಂತೆಯೇ ಎಲ್ಲರ ಗಮನ ಸೆಳೆಯುತ್ತಿದೆ. ಭಾವನಾತ್ಮಕ ಸಂಗೀತ, ಅರ್ಥಪೂರ್ಣ ಸಾಹಿತ್ಯ ಹಾಗೂ ಅದ್ಭುತ ದೃಶ್ಯ ಸಂಯೋಜನೆಯಿಂದ ಈ ಹಾಡು ಚಿತ್ರದ ಮೇಲಿನ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ.
“ಲ್ಯಾಂಡ್ ಲಾರ್ಡ್” ಚಿತ್ರವು ವಿಭಿನ್ನ ಕಥಾಹಂದರ, ಶಕ್ತಿಶಾಲಿ ಅಭಿನಯ ಮತ್ತು ತಾಂತ್ರಿಕ ಗುಣಮಟ್ಟದೊಂದಿಗೆ ಕನ್ನಡ ಚಿತ್ರರಂಗಕ್ಕೆ ಹೊಸ ಅನುಭವ ನೀಡಲಿದೆ ಎಂಬ ವಿಶ್ವಾಸ ನಿರ್ಮಾಪಕರದ್ದು. ಬಿಡುಗಡೆಯಾದ ಈ ಹಾಡು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.
PublicNext
19/12/2025 03:32 pm
LOADING...