ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

88 ಜನ ಪೊಲೀಸರೇ ಕ್ರಿಮಿನಲ್ಸ್ : ಸದನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ

ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಘನತೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆ ತರುವಂತಹ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಬರೋಬ್ಬರಿ 88 ಪೊಲೀಸರು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಈ ಹಿಂದೆ ರಾಜ್ಯದಲ್ಲಿ ನಡೆದ ಕೆಲವು ದರೋಡೆ, ಅಪಹರಣದಂತಹ ಗಂಭೀರ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಸದನದಲ್ಲಿ ಜೆಡಿಎಸ್ ಸದಸ್ಯ ಶರವಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಈ ಆಘಾತಕಾರಿ ಅಂಕಿಅಂಶವನ್ನು ದೃಢಪಡಿಸಿದ್ದಾರೆ. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Edited By : Nirmala Aralikatti
PublicNext

PublicNext

20/12/2025 11:14 am

Cinque Terre

29.06 K

Cinque Terre

1

ಸಂಬಂಧಿತ ಸುದ್ದಿ