ಬೆಂಗಳೂರು: ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಬೈರತಿ ಬಸವರಾಜ್ ಪತ್ತೆಗಾಗಿ ಸದ್ಯ ಮೂರು ವಿಶೇಷ ತಂಡಗಳನ್ನು ರಚಿಸಿರುವ ಸಿಐಡಿ ಅಧಿಕಾರಿಗಳು, ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಪೈಕಿ ಎರಡು ತಂಡಗಳು ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಜಾಲಾಡುತ್ತಿವೆ.
ನಿನ್ನೆ ಮಧ್ಯಾಹ್ನದ ನಂತರ ಬೈರತಿ ಬಸವರಾಜ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಇದು ಅವರ ಪತ್ತೆ ಕಾರ್ಯಕ್ಕೆ ಅಡ್ಡಿಯಾಗಿದೆ. ಸಿಐಡಿ ತಂಡವು ಬೈರತಿ ಬಸವರಾಜ್ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದೆ.
ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಗೆ ತೆರಳಿದ್ದ ವೇಳೆ ಬೈರತಿ ಬಸವರಾಜ್ ಎಲ್ಲಿ ತಂಗಿದ್ದರು, ಅಲ್ಲಿಂದ ಯಾವ ರಸ್ತೆಯ ಮೂಲಕ ನಿರ್ಗಮಿಸಿದರು ಎಂಬುದರ ಬಗ್ಗೆ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಬೆಳಗಾವಿ ಮತ್ತು ಅಲ್ಲಿಂದ ಹೊರ ಹೋಗುವ ಜಿಲ್ಲೆಗಳ ಟೋಲ್ ಗೇಟ್‌ಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.
PublicNext
20/12/2025 01:50 pm
LOADING...