ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನ ಖಂಡಿಸಿ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಧರಣಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಕುರಿತು ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಇಡಿ ಕೇಸ್ ಹಾಗೂ ನರೇಗಾ ಯೋಜನೆ ಹೆಸರು ಬದಲಾವಣೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಹೆಸರು ಕೈಬಿಟ್ಟು ಅವಮಾನ ಮಾಡಿರುವುದನ್ನು ಖಂಡಿಸಿ ಕೆಪಿಸಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.

ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಮಯೂರ್ ಜೈಕುಮಾರ್, ಬಿ ವಿ ಶ್ರೀನಿವಾಸ್, ಶಾಸಕರಾದ ಪ್ರದೀಪ್ ಈಶ್ವರ್, ಹರಿಪ್ರಸಾದ್, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸೌಮ್ಯ ರೆಡ್ಡಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ಮುಖಂಡರಾದ ಎಚ್ ಎಂ ರೇವಣ್ಣ, ಮೋಟಮ್ಮ, ರಾಣಿ ಸತೀಶ್, ಬಿ ಎಲ್ ಶಂಕರ್, ಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

Edited By :
PublicNext

PublicNext

20/12/2025 01:53 pm

Cinque Terre

11.95 K

Cinque Terre

1